ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಧ ಅಂಗವಾಗಿ ನ.09 ರಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ನಿವೃತ್ತ ಯೋಧರಾದ ಗಂಗಾಧರ ದಂಬೆಕೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತೀರ್ಪುಗಾರರಾಗಿ ಶಿವರಾಮ ಶಾಸ್ತ್ರಿ ಆಚಳ್ಳಿ, ತೇಜಪ್ಪ ಮಾಸ್ತರ್ ಸಂಪ್ಯಾಡಿ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ವಿನೋದ್ ಮೂಡಗದ್ದೆ, ರಮೇಶ್ ಮೆಟ್ಟಿನಡ್ಕ, ಕೃಷ್ಣ ಪ್ರಸಾದ್ ಕೋಲ್ಚಾರ್, ಸ್ಮಿತಾ ಮರಕತ ಹಾಗೂ ದಿವ್ಯ ಸುಜನ್ ಗುಡ್ಡೆಮನೆ ಉಪಸ್ಥಿತರಿದ್ದರು.
ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಪ್ರಧಾನ ಕಾರ್ಯದರ್ಶಿ ಹೆಚ್.ಬಿ ಕೇಶವ ಹೊಸೊಳಿಕೆ, ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ, ಪ್ರಚಾರ ಸಮಿತಿಯ ಸಂಚಾಲಕರಾದ ದಿನೇಶ್ ಹಾಲೆಮಜಲು, ಕಾರ್ಯದರ್ಶಿ ರೂಪವಾಣಿ.ಬಿ, ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ತುಂಬತ್ತಾಜೆ, ಸದಸ್ಯರಾದ ಶ್ರೀಮತಿ ಪೂರ್ಣಿಮಾ ಹಾಗೂ ಸಂಘಟಕರಾದ ಯೋಗೀಶ್ ಹೊಸೊಳಿಕೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವಿಜೇತರಿಗೆ ನವೆಂಬರ್ 16ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ವಳಲಂಬೆ : ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ



































