ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಎ.ಕೆ ಹಿಮಕರ ರವರಿಗೆ ಅವರ ಮನೆಗೆ ತೆರಳಿ ವೀಳ್ಯ ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ, ಸಂಘಟನಾ ಸಮಿತಿಯ ಕಾರ್ಯದರ್ಶಿ ಹೆಚ್.ಬಿ ಕೇಶವ ಹೊಸೊಳಿಕೆ, ಹೋಬಳಿ ಘಟಕದ ಕಾರ್ಯದರ್ಶಿ ವೆಂಕಪ್ಪ ಕೇನಾಜೆ, ಗೌರವ ಸಲಹೆಗಾರರಾದ ರಾಮಚಂದ್ರ ಪಳಂಗಾಯ, ಕೋಶಾಧಿಕಾರಿ ಪ್ರಭಾಕರ ಕಿರಿಭಾಗ, ಸಂಘಟಕರಾದ ಯೋಗೀಶ್ ಹೊಸೊಳಿಕೆ, ಗೋಪಾಲಕೃಷ್ಣ.ಎ.ಕೆ ಹಾಗೂ ನೀಲಿಮಾ ಅರ್ನೋಜಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ನ.16 ರಂದು ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಹ್ವಾನ





















































