ಚೆಂಬು : ಕಳ್ಳತನ ಮಾಡಿದ ಆರೋಪಿಗಳ ಬಂಧನ

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಗಡಿಭಾಗದ ಎಂ.ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ.ಪಿ. ರವರ ಮನೆಯಿಂದ ಕಳ್ಳತನ ಮಾಡಿದ್ದ ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮನೆಯವರು ಮನೆಯಲ್ಲಿ ಇಲ್ಲದಿರುವ ಸಮಯದಲ್ಲಿ ರೂಮಿನಲ್ಲಿದ್ದ ಗೋದ್ರೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ ಅಂದಾಜು ರೂ. 15,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನಾಭರಣಗಳನ್ನು ನ 5 ರಂದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು.
ಮಡಿಕೇರಿ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಡಿಕೇರಿ ಉಪವಿಭಾಗ ಡಿ ವೈ ಎಸ್ ಪಿ ಸೂರಜ್, ಮಡಿಕೇರಿ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕರಾದ ಚಂದ್ರಶೇಖರ್.ಹೆಚ್.ವಿ. ಪಿಎಸ್‌ಐ ಮಂಜುನಾಥ್, ಹಾಗೂ ಸಿದ್ದಾಪುರ ಪೊಲೀಸ್ ಠಾಣೆ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂಗಳು ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಬಗ್ಗೆ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ನ. 10 ರಂದು ಕಳ್ಳತನದ ಆರೋಪಿಗಳಾದ ಶಿವಮೊಗ್ಗ ಜಿಲ್ಲೆ ಭದ್ರವಾತಿ ತಾ। ಸಿದ್ದಾಪುರ ಗ್ರಾಮದ ನಿವಾಸಿ ಸಿದ್ದಲಿಂಗು ಎನ್, (28 ವರ್ಷ) ಮತ್ತು ರಘು.ಎನ್, (26 ವರ್ಷ) ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಹಾಗೂ ರೂ.8.50,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿ ಕೊಂಡಿರುತ್ತಾರೆ.

Leave a Comment

Your email address will not be published. Required fields are marked *

error: Content is protected !!
Scroll to Top