ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 243 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.
ಆರಂಭಿಕ ಸುತ್ತುಗಳಲ್ಲಿ ಎನ್ಡಿಎ ಮೈತ್ರಿಕೂಟ 152 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 64, ಜೆಡಿಯು 69, ಎಲ್ಜೆಪಿ 15, ಎಚ್ಎಎಂ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಮಹಾಘಟಬಂಧನ್ ಮೈತ್ರಿಕೂಟ 86 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಆರ್.ಜೆ.ಡಿ 64, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಲೆಫ್ಟ್ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಗಳಿಸಿವೆ. ಮಹುವಾ ಕ್ಷೇತ್ರದಲ್ಲಿ ತೇಜ್ ಪ್ರತಾಪ್ ಯಾದವ್ ಹಿನ್ನಡೆ ಅನುಭವಿಸಿದ್ದಾರೆ. ರಾಘೋಪುರ ಕ್ಷೇತ್ರದಲ್ಲಿ ತೇಜಸ್ವಿ ಯಾದವ್ ಮುನ್ನಡೆ ಸಾಧಿಸಿದ್ದಾರೆ.
ಬಿಹಾರ ಚುನಾವಣೆ ಮತ ಎಣಿಕೆ : 153 ಸ್ಥಾನಗಳೊಂದಿಗೆ ಬಿಜೆಪಿ-ಜೆಡಿಯು ಮೈತ್ರಿಕೂಟ ಭಾರಿ ಮುನ್ನಡೆ

















