ಬಹುತೇಕ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂಬ ಹೇಳಿಕೆ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆಯಾಚನೆ!

ಬೆಂಗಳೂರು‌ : ಬಹುತೇಕ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ.
ಎಲ್ಲರೂ ಅಲ್ಲ ಕೆಲವು ಕಲಾವಿದರು ಸಲಿಂಗಿಗಳು ಹೌದು. ಆ ಅನಿವಾರ್ಯತೆ ಸೃಷ್ಟಿಯಾಗುತ್ತಿತ್ತು. ಹಿಂದೆ ನವೆಂಬರ್ ನಲ್ಲಿ ಆರಂಭವಾದ ತಿರುಗಾಟ ಮೇ ಕೊನೆಯಲ್ಲಿ ಮುಕ್ತಾಯವಾಗುತ್ತಿತ್ತು. ಕಲಾವಿದರಿಗೆ ಮನೆಯ ಸಂಪರ್ಕ ಕಷ್ಟವಾಗುತ್ತಿತ್ತು. ಯಕ್ಷಗಾನ ಕಲೆ ಈಗ ಹಿಂದಿನಂತಿಲ್ಲ, ಕಲಾವಿದರಿಗೆ ಅನೇಕ ಸೌಲಭ್ಯಗಳಿವೆ. ಅನೇಕರು ಮಧ್ಯ ರಾತ್ರಿ ಪ್ರದರ್ಶನ ಮುಗಿಸಿ ಕಾರುಗಳಲ್ಲಿ ಮನೆಗೆ ತಲುಪುತ್ತಾರೆ. ಹಿಂದೆ ಆ ಸೌಕರ್ಯಗಳಿರಲಿಲ್ಲ. ಕಲಾವಿದರ ಕಷ್ಟಗಳ ಕುರಿತು ನಾನು ಮಾತನಾಡಿದ್ದೆ. ಯಕ್ಷಗಾನ ಕಲಾವಿದರಿಗೆ ನನ್ನ ಹೇಳಿಕೆ ನೋವು ತಂದುಕೊಟ್ಟಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದಿದ್ದಾರೆ.
ಅದರ ಜೊತೆಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಅವರು, ಕೆಲ ಯಕ್ಷಗಾನ ಕಲಾವಿದರು ಸಲಿಂಗಿಗಳು ಹೌದು. ಈ ವಿಚಾರವನ್ನು ನಾನು ಹೊಸದಾಗಿ ಹೇಳುತ್ತಿಲ್ಲ ಎಂದಿದ್ದಾರೆ. ನನ್ನ ಉದ್ದೇಶ ಕಲಾವಿದರ ಬದುಕು ಉಜ್ವಲಗೊಳಿಸುವುದು. ಹೀಗಾಗಿ ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಯಕ್ಷಗಾನ ಕಲಾವಿದರು, ಅಭಿಮಾನಿಗಳಲ್ಲಿ ವಿಷಾದ ವ್ಯಕ್ತಪಡಿಸುವೆ ಎಂದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ನನ್ನನ್ನು ಕೆಳಗಿಳಿಸಿದರೂ ಪರವಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top