ಸ್ಕೂಟಿ ಅಪಘಾತದಲ್ಲಿ ಯುವತಿ ಸಾವು

ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಯುವತಿ ಮೃತಪಟ್ಟ ಘಟನೆ ಬಂಟ್ವಾಳದಿಂದ ವರದಿಯಾಗಿದೆ.
ಬಂಟ್ವಾಳದ ಕಾವಳಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಕಡಬದ ಯುವತಿ ಮೃತಪಟ್ಟಿದ್ದಾರೆ.
ಸ್ಕೂಟರ್ ಸವಾರೆ, ಕಡಬದ ಶ್ರೀ ದುರ್ಗಾ ಎಲೆಕ್ಟ್ರಿಕಲ್ ಮಾಲಕ ಕುಂತೂರು ನಿವಾಸಿ ಸುನಿಲ್ ಕೊಲತ್ತಾಯ ಎಂಬವರ ಪುತ್ರಿ ಅನನ್ಯಾ (21ವ) ಮೃತಪಟ್ಟವರು. ಸಹ ಸವಾರೆ, ಗುರುವಾಯನಕೆರೆ ನಿವಾಸಿ ಪೃಥ್ವಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇಬ್ಬರೂ ಮಂಗಳೂರು ಕಾಲೇಜೊಂದರ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top