ಚಿಕ್ಕಮಗಳೂರಿನ ಕಡೂರು ತಾಲೂಕಿನ ನವಿಲೇಕಲ್ಲುಗುಡ್ಡ ಗ್ರಾಮದಲ್ಲಿ, ತಂದೆಯ ಮುಂದೆಯೇ ಚಿರತೆ ದಾಳಿ ಮಾಡಿ ಸಾನ್ವಿ ಎಂಬ ಮಗುವನ್ನು ಕೊಂದಿದೆ. ಕೂಲಿ ಕಾರ್ಮಿಕ ಬಸವರಾಜ್ ಅವರ ಪುತ್ರಿ ಸಾನ್ವಿ, ಮನೆಯ ಹಿಂದೆ ನಿಂತಿದ್ದಾಗ ಚಿರತೆ ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ದಿದೆ. ಘಟನೆ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಗು ಬಲಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಿರತೆಯನ್ನು ಸೆರೆಹಿಡಿಯುವಂತೆ ಈ ಹಿಂದೆ ಹಲವು ಬಾರಿ ಮನವಿ ಮಾಡಲಾಗಿತ್ತು
ಚಿರತೆ ದಾಳಿಗೆ ಐದು ವರ್ಷದ ಮಗು ಬಲಿ



































