ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾನ : ಪಿ.ಬಿ ಸುಧಾಕರ ರೈ

ರಕ್ತದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾ.ರಕ್ತದಾನ ಮಾಡಿದರೆ ರಕ್ತದಾನಿಗಳ ಆರೋಗ್ಯ ಹೆಚ್ಚುತ್ತದೆ.ರಕ್ತದಾನ ಮಾಡಲು ಯಾರೂ ಭಯಪಡುವ ಅಗತ್ಯವಿಲ್ಲ.ಯುವ ಜನಾಂಗ ರಕ್ತದಾನ ಮಾಡಲು ಮುಂದೆ ಎಂದು ಬರಬೇಕು ಎಂದು ಭಾರತೀಯ ರೆಡ್ ಕ್ರಾಸ್ತ್ ಸಂಸ್ಥೆಯ ಸುಳ್ಯ ತಾಲೂಕು ಸಭಾಪತಿ ಪಿ.ಬಿ ಸುಧಾಕರ ರೈ ಹೇಳಿದರು.
ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನವಂಬ‌ರ್ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ಸುಳ್ಯ ಇದರ ಸಭಾಂಗಣದಲ್ಲಿ ನಡೆದ ಬ್ರಹತ್ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಎನ್. ಎ. ರಾಮಚಂದ್ರ ರವರು ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಪ್ರತಿನಿಧಿ ಗಣೇಶ್ ಭಟ್, ಜನಜಾಗೃತಿ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷರಾದ ಲೋಕನಾಥ ಅಮೆಚೂರು, ಸುಳ್ಯ ವಲಯದ ಅಧ್ಯಕ್ಷರಾದ ನ್ಯಾಯವಾದಿ ವೆಂಕಪ್ಪಗೌಡ ರವರು ಈ ಸಂದರ್ಭದಲ್ಲಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್‌ ಕಣಿಮರಡ್ಕ, ಯೋಜನಾಧಿಕಾರಿ ಮಾಧವ ಗೌಡ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಕೋಶಾಧಿಕಾರಿ ವಿನಯ್ ಕುಮಾ‌ರ್ ಮೊದಲಾದವರು ಉಪಸ್ಥಿತರಿದ್ದರು.
ಯೋಜನಾಧಿಕಾರಿ ಮಾದವ ಗೌಡ ಸ್ವಾಗತಿಸಿದರು.ಮೇಲ್ವಿಚಾರಕ ದಿನೇಶ್ ಕಾರ್ಯಕ್ರಮ ನಿರೂಪಿಸಿ ಮೇಲ್ವಿಚಾರಕಿ ಅನಿತಾ ವಂದಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top