ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಡಿ.ದೇವರಾಜ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದ ವಿಷಯವನ್ನು ಮುಚ್ಚಿಟ್ಟ ಆರೋಪದ ಮೇಲೆ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರರಾದ ಪಾರ್ವತಿ ಕುದಿರಿಮೋತಿ ಹಾಗೂ ಪ್ರಿಯಾಂಕಾ ಸಿಂಧೋಗಿ ಅವರನ್ನು ಅಮಾನತುಗೊಳಿಸಲಾಗಿದೆ. ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕ ಹನುಮನಗೌಡ ಬತ್ತಿಯನ್ನು ಬಂಧಿಸಲಾಗಿದೆ. ಶಿಕ್ಷಕರು, ವೈದ್ಯಾಧಿಕಾರಿ ಸೇರಿದಂತೆ ಒಟ್ಟು 6 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿಯ ವಿದ್ಯಾರ್ಥಿನಿ,ಹಲವರ ವಿರುದ್ಧ ಪ್ರಕರಣ ದಾಖಲು!



































