ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಖಂಡಿತಾ ಬಿಟ್ಟು ಕೊಡುತ್ತಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಆದರೆ, ಅದು 30 ತಿಂಗಳ ನಂತರವೋ ಅಥವಾ ಅದಕ್ಕೂ ಮೊದಲೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲವು ಕಾಂಗ್ರೆಸ್ ಹೈಕಮಾಂಡ್‌ನ ರಹಸ್ಯವಾಗಿಯೇ ಉಳಿದಿದೆ.
ಸಿದ್ದರಾಮಯ್ಯ ಸಿ.ಎಂ ಸ್ಥಾನ ಬಿಟ್ಟು ಕೊಡುವುದು ಗ್ಯಾರಂಟಿ : ಸತೀಶ್ ಜಾರಕಿಹೊಳಿ

















