ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಡಿ.3ರಂದು ಮನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದು ಮುಹಮ್ಮದ್ ಹಝೀರಿನ್ ಎಂಬ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಅಂಗಡಿಗೆ ತಿಂಡಿ ತರಲು ಹೋಗಿ ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾರು ಡಿಕ್ಕಿಯಾಗಿ ಬಾಲಕ ಸಾವು

















