ಕಲ್ಲುಗುಂಡಿ : ಆತ್ಮಹತ್ಯೆಗೆ ಯತ್ನಿಸಿ ನೇಣು ಹಾಕಿಕೊಂಡು ಜಿಗಿದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಅರಂತೋಡು : ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು ಜಿಗಿದ ವ್ಯಕ್ತಿಯ ತಲೆಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿಯಿಂದ ಡಿ.5ರಂದು ವರದಿಯಾಗಿದೆ.
ಐವರ್ನಾಡು ಗ್ರಾಮದ ಮಾಧವ ಎಂಬ ವ್ಯಕ್ತಿ ಆತ್ಮಹತ್ಯೆಗೆ ಪ್ರಯತ್ನಿಸಿ ಬಿ ದ್ದು ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ವ್ಯಕ್ತಿಯೋರ್ವರು ಕಲ್ಲುಗುಂಡಿ ಅವರ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಜಿಗಿದ ಸಂದರ್ಭ ಕೇಬಲ್ ಕಟ್ಟಾಗಿ ನೆಲಕ್ಕೆ ಬಿದ್ದು ತಲೆಗೆ ಗಾಯ ಮಾಡಿಕೊಂಡು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು.
ಕೇಬಲ್ ವಯರ್ ಕುತ್ತಿಗೆಗೆ ಬಿಗಿದು ಮೇಲಿನಿಂದ ಜಿಗಿದಿದ್ದಾಗ ವಯರ್‌ ಕಟ್ಟಾಗಿ ಅವರು ನೆಲಕ್ಕೆ ಬಿದ್ದರು. ಅಲ್ಲಿಂದ ಮೇಲೇಳಲು ಸಾಧ್ಯವಾಗದೆ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವರಿಗೆ ಫೋನ್ ಮಾಡಿ ವಿಷಯವನ್ನು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಅವರು ಸ್ಥಳಕ್ಕೆ ಹೋಗಿ ನೋಡಿದಾಗ ಮಾಧವರ ಕುತ್ತಿಗೆಯಲ್ಲಿ ಕೇಬಲ್‌ ವಯರ್ ಕಂಡುಬಂದಿದ್ದು ಕೂಡಲೆ ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top