ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ.
ಗುತ್ತಿಗಾರಿನ ಚಿಕ್ಕುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಳು. ಅಸ್ವಸ್ಥಗೊಂಡ ಬಳಿಕ ವಿಷಯ ಗೊತ್ತಾಗಿ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಇಲಿ ಪಾಷಾಣ ಸೇವಿಸಿದ ವಿದ್ಯಾರ್ಥಿನಿ ಸಾವು

















