ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)-2025ನೇ ಸಾಲಿನ ಪರೀಕ್ಷೆಯು ಡಿಸೆಂಬರ್ 7ರಂದು ನಡೆಯಲಿದ್ದು, ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಲಾಗಿದೆ.
ಪರೀಕ್ಷೆಯು ಬೆಳಗ್ಗೆ 9.30ರಿಂದ 12ರವರೆಗೆ ಮತ್ತು ಮಧ್ಯಾಹ್ನ 2ರಿಂದ 4.30ರವರೆಗೆ ಜರುಗಲಿದೆ. ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ, ಸಹಿ ಮತ್ತು ಭಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್‌ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ್ ಕಾರ್ಡ್, ಇಲ್ಲವೇ ಇತರೆ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತೋರಿಸಬೇಕು ಎಂದು ತಿಳಿಸಲಾಗಿದೆ.
ನಾಳೆ ಶಿಕ್ಷಕರ ಅರ್ಹತಾ ಪರೀಕ್ಷೆ



































