ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾರ್ಕೋಡಿನಲ್ಲಿರುವ ಕಟ್ಟಡವೊಂದರಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ವರದಿಯಾಗಿದೆ.
ಶವವನ್ನು‌ ಶೇಖಪಟ್ಟಿ ನಿವಾಸಿ ದಿ. ಕೃಷ್ಣ ಬೆಳ್ಳಪ್ಪಾಡ ರವರ ಪುತ್ರ ರಾಜೇಶ್ ಶೇಖಪಟ್ಟಿಯವರದು ಎಂದು ಗುರುತಿಸಲಾಗಿದೆ.
ಕೆಲ ವರ್ಷದ ಹಿಂದೆ ಮಂಗಳ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬಾರ್ ಬಂದ್ ಆದ ನಂತರ ಅದೇ ಕಟ್ಟಡದಲ್ಲಿ ವಾಸವಾಗಿದ್ದು ಕಳೆದ ತಡ ರಾತ್ರಿ ರೂಮಿನಲ್ಲಿ ಬಟ್ಟೆಯನ್ನು ಕುತ್ತಿಗೆಗೆ ಬಿಗಿದು ಪಕ್ಕಾಸಿಗೆ ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿರಬೇಕು‌ ಎಂದು‌ ಸಂಶಯಿಸಲಾಗಿದೆ. ಮೃತಪಟ್ಟ ವ್ಯಕ್ತಿ‌ ಸಹೋದರ ಉಮೇಶ್, ಅನಿಲ್, ಸಹೋದರಿ ರಮ್ಯ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಯುವಕ ಅವಿವಾಹಿತನಾಗಿದ್ದು ಸ್ಥಳೀಯವಾಗಿ ಉತ್ತಮ ಕ್ರಿಕೆಟ್ ಆಟಗಾರನಾಗಿ ಗುರುತಿಸಿಕೊಂಡಿದ್ದರು.
ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top