ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಮಂಗಳೂರು ಇನ್ಸಿಟ್ಯೂಟ್ ಆಫ್ ಆಂಕೊಲಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಸುಳ್ಯ ವತಿಯಿಂದ ಕ್ಯಾನ್ಸರ್ ಜಾಗೃತಿ ಅಭಿಯಾನ ಇದರ ಅಂಗವಾಗಿ ಡಿ. 13 ರಂದು ಸುಳ್ಯದ ಪ್ರಮುಖ ರಸ್ತೆಗಳಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ನಡೆಯಿತು.
ಸುಳ್ಯದ ರಥಬೀದಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡರವರು ಡೋಲು ಬಾರಿಸುವ ಮೂಲಕ ಜಾಥಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ದಾಮೋದರ ಗೌಡ ನಾರ್ಕೋಡು, ಸುಳ್ಯ ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಗೋಪಾಲಕೃಷ್ಣ ಕೆ. ಎಸ್., ಜಿನ್ನಪ್ಪ ಪೂಜಾರಿ, ಮಂಗಳೂರು ಇನ್ಸಿಟ್ಯೂಟ್ ಆಫ್ ಆಂಕೊಲಜಿಯ ಸಿಬ್ಬಂದಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕ್ಯಾನ್ಸರ್ ಜಾಗೃತಿ ಅಭಿಯಾನ ಅಂಗವಾಗಿ ಸುಳ್ಯದ ಪ್ರಮುಖ ರಸ್ತೆಗಳಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

















