ಡಿ.25 ಮತ್ತು 26ರಂದು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕೆ.ವಿ.ಜಿ. ಸುಳ್ಯ ಹಬ್ಬ ಕಾರ್ಯಕ್ರಮ

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ದಶಂಬರ 25 ಮತ್ತು 26 ರಂದು ಕೆ.ವಿ.ಜಿ. ಸುಳ್ಯ ಹಬ್ಬ ಸುಳ್ಯ ಚೆನ್ನಕೇಶವ ದೇವಾಲಯದ ವಠಾರದಲ್ಲಿ ನಡೆಯಲಿದೆ ಎಂದು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಮಿತಿಯ ಅಧ್ಯಕ್ಷ ಕೆ.ಟಿ.ವಿಶ್ವನಾಥ್ ತಿಳಿಸಿದ್ದಾರೆ.
ಡಿ.೧೩ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ದ.೨೫ ರಂದು ಬೆಳಿಗ್ಗೆಯಿಂದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಆಯೋಜಿಸಲಾಗಿದೆ. ಸಂಜೆ ಸಭಾ ಕಾರ್ಯಕ್ರಮಕ್ಕೂ ಮೊದಲು ಮನೋರಂಜನಾ ಕಾರ್ಯಕ್ರಮವಾಗಿ ಸ್ಥಳೀಯ ಕಲಾವಿದರಿಂದ ಸಂಗೀತ ರಸಮಂಜರಿ ನಡೆಯುವುದು.
ಸಭಾ ಕಾರ್ಯಕ್ರಮದಲ್ಲಿ ಡಾ.ಕಿಶನ್ ರಾವ್ ಬಾಳಿಲ (ವೈದ್ಯಕೀಯ), ಮಯೂರ್ ಅಂಬೆಕಲ್ಲು (ಸಿನಿಮಾ ರಂಗ), ರಮೇಶ್ ಮೆಟ್ಟಿನಡ್ಕ (ಜನಪದ ಸಾಂಸ್ಕೃತಿಕ), ಹರ್ಷಿತ್ ಪಡ್ರೆ (ಮಾಧ್ಯಮ), ಕು.ಜಸ್ಮಿತಾ ಕೊಡೆಂಕಿರಿ (ಕ್ರೀಡೆ) ಯವರನ್ನು ಕೆ.ವಿ.ಜಿ. ಯುವ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ವಿಶ್ವನಾಥ್ ವಹಿಸಲಿದ್ದಾರೆ. ಮಂಗಳೂರು ವಿವಿ ಉಪಕುಲಪತಿ ಡಾ। ಪಿ.ಎಲ್. ಧರ್ಮ ಅಭಿನಂದನಾ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ| ಕೆ.ವಿ. ರೇಣುಕಾಪ್ರಸಾದ್ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಗೌರವ ಉಪಸ್ಥಿತರಿರುವರು.





















































































ಡಿ.೨೬ರಂದು ಬೆಳಿಗ್ಗೆ ಸುಳ್ಯ ಹಬ್ಬ ಸಮಿತಿಯಿಂದ ನೀಡಲಾಗುವ ಒಂದು ಲಕ್ಷ ರೂ. ನೆರವಿನಿಂದ ಮನೆಯನ್ನು ಪೂರ್ಣಗೊಳಿಸಿರುವ ಜಟ್ಟಿಪಳ್ಳದ ಕಮಲರವರ ಮನೆಯ ಉದ್ಘಾಟನೆ ನಡೆಯುವುದು. ಸುಳ್ಯ ಜೂನಿಯ‌ರ್ ಕಾಲೇಜ್ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಮಾಧ್ಯಮ ಸಂಸ್ಥೆಯ ಮುಖ್ಯಸ್ಥರಾದ ಡಾ.ಯು.ಪಿ.ಶಿವಾನಂದರಿಗೆ ಹಾಗೂ ೫೦ ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಕೊಂಡು ಇಂದಿಗೂ ಸಕ್ರಿಯರಾಗಿರುವ ಎಸ್.ಎಂ.ಬಾಪೂ ಸಾಹೇಬರಿಗೆ ಕೆ.ವಿ.ಜಿ. ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ| ಕೆ.ವಿ.ಚಿದಾನಂದರು ವಹಿಸಲಿದ್ದಾರೆ. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ| ಸಿ.ಸೋಮಶೇಖರ ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಗೌರವ ಉಪಸ್ಥಿತರಿರುವರು.
ರಾತ್ರಿ ೮.೩೦ ರಿಂದ ದೇವದಾಸ್ ಕಾಪಿಕಾಡುರವರ ಪುದರ್ ದೀತಿಜಿ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನವಾಗಲಿದೆ ಎಂದು ವಿವರ ನೀಡಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಹರೀಶ್ ಬಂಟ್ವಾಳ್‌, ನಿಕಟಪೂರ್ವ ಅಧ್ಯಕ್ಷ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು,ಖಜಾಂಚಿ ಚಂದ್ರಾವತಿ ಬಡ್ಡಡ್ಕ, ಪಿ.ಎಸ್.ಗಂಗಾಧರ್, ಪಿ.ಎಂ.ರಂಗನಾಥ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top