ಆರಂತೋಡು ಗ್ರಾಮ ಪಂಚಾಯತ್ ನ ಡಿಸೇಂಬರ್ ತಿಂಗಳ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ಡಿ.20ರಂದು ನಡೆಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೈಲೆಟ್ ಯೋಜನೆಯಾಗಿ ಆಯ್ಕೆ ಮಾಡಿಕೊಂಡಿರುವ ಆರಂತೋಡು ಗ್ರಾಮ ಪಂಚಾಯತ್ ನ.ತೊಡಿಕಾನ ಗ್ರಾಮದ ಅಡ್ಯಡ್ಕದಲ್ಲಿ 24/7 ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಯನ್ನು ಡಿಸೆಂಬರ್ ತಿಂಗಳ ಅಂತ್ಯದೊಳಗಾಗಿ ಚಾಲನೆ ನೀಡುವುದೆಂದು ಸರ್ವ ಸಮ್ಮತದಿಂದ ತೀರ್ಮಾನಿಸಲಾಯಿತು. ಅಲ್ಲದೆ ಸರಕಾರದಿಂದ ಆಯ್ಕೆಯಾದ ತಾಲೂಕಿನ ಏಕೈಕ ಪಂಚಾಯತ್ ಕಲಿಕಾ ಕೇಂದ್ರ ( Panchayat learning centre ) ಮತ್ತು ಪಂಚಾಯತ್ ವಿನೂತನ ಅಭಿಲೇಖಾಯ ಕೊಠಡಿ( record room)ಉದ್ಘಾಟನೆಯನ್ನು ಮಾಡುವುದೆಂದು ತೀರ್ಮಾನಿಸಲಾಯಿತು.ಅಲ್ಲದೆ ಸಭೆಯಲ್ಲಿ ಪಂಚಾಯತ್ ಸಿಬ್ಬಂದಿಗಳು ಮತ್ತು ಸ್ವಚ್ಛತಾ ಘಟಕದ ಸಿಬ್ಬಂದಿಗಳ ವೇತನ ಹೆಚ್ಚಳದ ಬೇಡಿಕೆಯನ್ನು ಈಡೇರಿಸಲು ತೀರ್ಮಾನಿಸಲಾಯಿತು. ಅಲ್ಲದೆ ರಸ್ತೆ, ಬೀದಿ ದೀಪ ದುರಸ್ಥಿ, ಅನಧಿಕೃತ ವ್ಯಾಪಾರ ವಿರುದ್ಧ ಕ್ರಮ ಕೈಗೊಳ್ಳವುದು,ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಭವಾನಿ ಚಿಟ್ಟನೂರು, ಸದಸ್ಯರಾದ ಶಿವಾನಂದ ಕುಕ್ಕುಂಬಳ, ವೆಂಕಟರಮಣ ಪೆತ್ತಾಜೆ, ರವೀಂದ್ರ ಪೂಜಾರಿ ಪಂಜಿಕೋಡಿ, ಗಂಗಾಧರ ಗುಂಡ್ಲಬನ, ಪುಷ್ಪಾಧರ ಕೊಡಂಕೇರಿ, ಹರಿಣಿ ದೇರಾಜೆ, ಶ್ವೇತಾ ಅರಮನೆ ಗಾಯ, ಮಾಲಿನಿ ಉಳುವಾರು, ಸುಜಯ ಮೇಲೆ ಅಡ್ತಲೆ, ಉಷಾ ಅಡ್ಯಡ್ಕ, ವಿನೋದ ತೊಡಿಕಾನ, ಸರಸ್ವತಿ ಬಿಳಿ ಯಾರು ಉಪಸ್ಥಿತರಿದ್ದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಮ್ ಆರ್. ಎಲ್ಲರನ್ನೂ ಸ್ವಾಗತಿಸಿ ಸರಕಾರದ ಸುತ್ತೋಲೆಗಳನ್ನು ಮಂಡಿಸಿಯರು. ಪಂಚಾಯತ್ ಮತ್ತು ಸ್ವಚ್ಛತಾ ಘಟಕದ ಸಿಬ್ಬಂದಿಗಳು ಸಹಕರಿಸಿದರು. ಗ್ರಾಮ ಪಂಚಾಯತ್ ಸಾಮಾನ್ಯ ಸಭೆ.
ಅರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ



































