ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನವು ಪರಿವರ್ತನಾ ಸೇವಾ ಟ್ರಸ್ಟ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಶಾ ಮುಕ್ತ ಕರ್ನಾಟಕ ಅಭಿಯಾನ ರಥಯಾತ್ರೆ ಹಾಗೂ ಜನಜಾಗೃತಿ ಕಾಯಕ್ರಮವು ಕಾಲೇಜಿನ ಎನ್ ಎಸ್ ಎಸ್ ಘಟಕದ ಪಾಲ್ಗೊಳ್ಳುವಿಕೆಯೊಂದಿಗೆ ಡಿ. 20 ರಂದು ನೆಹರೂ ಮೆಮೋರಿಯಲ್ ಕಾಲೇಜಿನ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಸಂಧರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಸುಳ್ಯ ಇದರ ಅಧ್ಯಕ್ಷರು ಹಾಗೂ ಕೆ ವಿ ಜಿ ಆಯುರ್ವೇದ ಕಾಲೇಜಿನ ಪಂಚಕರ್ಮ ವಿಭಾಗದ ಪ್ರಾಧ್ಯಾಪಕರಾದ ಡಾ. ಲಕ್ಷ್ಮೀಶ ಕೆ ಎಸ್ ರವರು ಅತಿಥಿಗಳನ್ನು ಹಾಗೂ ಉಪಸ್ಥಿತರನ್ನು ಸ್ವಾಗತಿಸಿದರು.
ಸುಳ್ಯದ ತಹಶೀಲ್ದಾರ್ ಕು. ಮಂಜುಳಾ ಎಂ ಅವರು ರಥಯಾತ್ರೆಗೆ ಚಾಲನೆಯನ್ನು ನೀಡಿ, ಯುವಜನತೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತರಾಗಿರಬೇಕೆಂದು ಸಂದೇಶವನ್ನು ನೀಡಿದರು.
ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿನಿ ಕು. ಬಿಂದುಶ್ರೀ ನಶಾ ಮುಕ್ತದ ಕರ್ನಾಟಕ ಅಭಿಯಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ ವಿ ಯವರು ಮಾದಕ ವಸ್ತುಗಳ ಕುರಿತು ಹಾಗೂ ವ್ಯಸನದಿಂದಾಗುವ ದುರಂತಗಳ ಬಗ್ಗೆ ಯುವಕರಲ್ಲಿ ಜಾಗೃತಿಯನ್ನು ಮೂಡಿಸಿ ನಶಾ ಮುಕ್ತ ನಾಡನ್ನು ನಿರ್ಮಿಸಲು ಕರೆ ನೀಡಿದರು.
ನಶಾ ಮುಕ್ತ ಕರ್ನಾಟಕ ಅಭಿಯಾನದ ರಥಯಾತ್ರೆಯೊಂದಿಗೆ ಆಗಮಿಸಿದ ಪರಿವರ್ತನಾ ಸೇವಾ ಟ್ರಸ್ಟ್ ಬೆಂಗಳೂರು ಇದರ ಸದಸ್ಯರಾದ ಶ್ರೀ. ಸಂದೇಶ್ ರವರು ರಥಯಾತ್ರೆಯ ಪ್ರಾಮುಖ್ಯತೆಯನ್ನು ವಿವರಿಸಿದರು.
ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಧ್ಯಾಪಕಿಯಾದ ಶ್ರೀಮತಿ. ಮಮತಾ ಕೆ ಅವರು ವಂದನಾರ್ಪಣೆಯನ್ನು ಸಲ್ಲಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top