ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಚೊಕ್ಕಾಡಿ : ಸನ್ಮಾನ ಸಮಾರಂಭ

ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ದಿನಾಂಕ 18-12-2025ರಂದು ಅಮರಪಡ್ನೂರು ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಗೀತಾ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಕ್ಷೇತ್ರದಲ್ಲಿ ನಿರಂತರವಾಗಿ ನಿಷ್ಠಾವಂತ ಸೇವೆ ಸಲ್ಲಿಸುತ್ತಿರುವ ಅವರ ಕಾರ್ಯವನ್ನು ಗುರುತಿಸಿ ಈ ಸನ್ಮಾನವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಮರಪಡ್ನೂರು ಗ್ರಾಮ ಪಂಚಾಯತ್ ಪಿಡಿಒ ಆಗಿರುವ ದಯಾನಂದ ಪತ್ಕುಂಜ, ಅಜ್ಜನಗದ್ದೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೂಪಾವಾಣಿ ಹಾಗೂ ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು, ಶ್ರೀಮತಿ ಗೀತಾ ಅವರ ಸೇವಾಭಾವಕ್ಕೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮವು ಸ್ವಚ್ಛತೆಯ ಮಹತ್ವವನ್ನು ಸಮಾಜಕ್ಕೆ ಮತ್ತೊಮ್ಮೆ ಸಾರುವ ಸಂದೇಶದೊಂದಿಗೆ ಯಶಸ್ವಿಯಾಗಿ ನಡೆಯಿತು

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top