ತೊಡಿಕಾನ : ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ

ತೊಡಿಕಾನ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಡಿ. 26 ರಂದು ಶಾಲೆಯಲ್ಲಿ ನಡೆಯಿತು. ಅಮೃತ ಮಹೋತ್ಸವ ಆಚರಣ ಸಮಿತಿ ತೊಡಿಕಾನ ಶಾಲೆ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಶಿಬಿರವನ್ನು ಉದ್ಘಾಟಿಸಿದರು. ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ರೋ. ರಾಮಕೃಷ್ಣ ರಾವ್ ರಕ್ತದಾನದ ಕುರಿತು ಮಾಹಿತಿ ನೀಡಿದರು. ಬಳಿಕ‌ ಅವರನ್ನು ಅಭಿನಂದಿಸಲಾಯಿತು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಪಂಜಿಕೋಡಿ, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ನವೀನ್ ಅಮೆಮನೆ ವೇದಿಕೆಯಲ್ಲಿದ್ದರು.
ಶಾಲಾ ಮುಖ್ಯ ಶಿಕ್ಷಕ ಅರುಣ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಿಕ್ಷಕಿ ಮಮತಾ ವಂದಿಸಿದರು. ಶಿಕ್ಷಕಿ ಸ್ನೇಹಲತಾ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಹಳೆ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top