“ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಯಾವುದೇ ಖಾಸಗಿ ವಿದ್ಯಾಸಂಸ್ಥೆಗೆ ಕಡಿಮೆ ಇಲ್ಲದ ರೀತಿಯಲ್ಲಿ ಉತ್ತಮವಾಗಿ ಬೆಳೆದಿದೆ. ಫಲಿತಾಂಶ ಫಲಿತಾಂಶ ಸಂಸ್ಥೆಗೆ ದೊರೆಯುತ್ತಿದೆ. ಇಂತಹ ಸಂಸ್ಥೆಯ ಅಮೃತಮಹೋತ್ಸವ ಆಚರಣೆ ನಮ್ಮೆಲ್ಲರ ಪಾಲಿಗೆ ಬಂದಿರುವುದು ನಮ್ಮ ಸುಯೋಗ ಎಂದು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಅಮೃತಮಹೋತ್ಸವ ಕಾರ್ಯಕ್ರಮವನ್ನು ಡಿ.27 ರಂದು ಉದ್ಘಾಟಿಸಿ,ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಂದರು.ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತಮಹೋತ್ಸವ ಆಚರಣೆ ನಮ್ಮ ಸೌಭಾಗ್ಯ. ಈ ಕಾರ್ಯಕ್ರಮ ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ೧ ಕೋಟಿ ೨೫ ಲಕ್ಷದ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ . ಅಕ್ಷರ ದಾಸೋಹ, ಭೋಜನಾಲಯ, ತರಗತಿ ಕೊಠಡಿಗಳ ಕೊಡುಗೆ ಇದೆ.ಎಲ್ಲರೂ ಸಹಕಾರದಿಂದ ಯೋಜನೆಗಳು ಸಾಕಾರಗೊಳ್ಳುತ್ತಿದೆ ಎಂದವರು ಹೇಳಿದರು.
ಬೆಂಗಳೂರು ಕೆ.ಎಸ್.ಇ.ಎ.ಬಿ. ಕಾರ್ಯದರ್ಶಿ ಮಲ್ಲೇಸ್ವಾಮಿಯವರು ಜ್ಞಾನಾಮೃತ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಜ್ಞಾನಾಮೃತ ಸಂಚಿಕೆ ಸುಳ್ಯದ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯಲಿ. ಸುಳ್ಯದ ವಿಚಾರಗಳನ್ನು ಮುಂದಿನ ಪೀಳಿಗೆಗೆ ಹಂಚುವ ಸಂಚಿಕೆಯಾಗಲಿ
ಬೆಂಗಳೂರು ಕೆ.ಎಸ್.ಇ.ಎ.ಬಿ. ಕಾರ್ಯದರ್ಶಿ ಮಲ್ಲೇಸ್ವಾಮಿಯವರು ಜ್ಞಾನಾಮೃತ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಜ್ಞಾನಾಮೃತ ಸಂಚಿಕೆ ಸುಳ್ಯದ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯಲಿ. ಸುಳ್ಯದ ವಿಚಾರಗಳನ್ನು ಮುಂದಿನ ಪೀಳಿಗೆಗೆ ಹಂಚುವ ಸಂಚಿಕೆಯಾಗಿದೆ. ಯಶಸ್ವಿಯಾಗಲಿ ಎಂದರು.
ವಸ್ತು ಪ್ರದರ್ಶನ ಮಳಿಗೆಯನ್ನು
ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು.
ಭೋಜನಾಲಯ ಕೊಠಡಿಯನ್ನು
೧೩ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಡುತ್ತಿರುವ ನಿವೃತ್ತ ಅಧ್ಯಾಪಕ, ದಾನಿ ಕೃಷ್ಣ ನಾವಡರು ಕೊಠಡಿಯನ್ನು ಲೋಕಾರ್ಪಣೆ ಮಾಡಿದರು.
ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ತಹಶೀಲ್ದಾರ್ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ಭೋಜನಾಲಯ ಕೊಠಡಿ ದಾನಿ ಕೃಷ್ಣ ನಾವಡ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಸುಳ್ಯ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫಾ, ಸುಳ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ ಮಂಜುಳಾ ಬಡಿಗೇರ್, ಸುಳ್ಯ ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ, ಅಮೃತಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಬಿ.ಸದಾಶಿವ, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿ, ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ, ಹಿರಿಯ ವಿದ್ಯಾರ್ಥಿನ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಅಮೃತಮಹೋತ್ಸವ ಸಮಿತಿ ಜೊತೆ ಕೋಶಾಧಿಕಾರಿ ರಾಮಚಂದ್ರ ಪಲ್ಲತ್ತಡ್ಕ, ವಿದ್ಯಾರ್ಥಿ ನಾಯಕರುಗಳಾದ ಪ್ರಜ್ವಲ್ ಪಿ.ಬಿ., ಲಿಖಿತ್ ಎಂ.ಆರ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ಮರಣ ಸಂಚಿಕೆ ಸಂಪಾದಕ ಚಂದ್ರಾವತಿ ಪೇರಾಲು ಸ್ಮರಣ ಸಂಚಿಕೆ ‘ಜ್ಞಾನಾಮೃತ’ ಕುರಿತು ಮಾತನಾಡಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈಯವರು ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು.



































