ನಮ್ಮ ಸಂಸ್ಕೃತಿಯನ್ನು ಗೌರವಿಸುವುದರ ಜತೆಗೆ ನಮ್ಮ ಅಪ್ಪ, ಅಮ್ಮ, ಹಾಗೂ ವಿದ್ಯೆ ಕಲಿಸಿದ ಶಿಕ್ಷಕರು ಸಂತೋಷಪಡುವಂತೆ ಮಕ್ಕಳು ಸಮಾಜದಲ್ಲಿ ಬದುಕಬೇಕು” ಎಂದು ವಾಗ್ನಿ ಎನ್.ಆರ್.ದಾಮೋದರ ಶರ್ಮ ಬಾರ್ಕೂರು ಹೇಳಿದರು.
ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತಮಹೋತ್ಸವ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ದಿಕ್ಕೂಚಿ ಭಾಷಣ ಮಾಡಿದರು.
“ಅನುಭವಸಂಪನ್ನ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಶಿಕ್ಷಣ ಕಲೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇಲ್ಲಿ ಕಲಿತು ಸಮಾಜದಲ್ಲಿ ಸಾಧಕರಾಗಿರುವ ವ್ಯಕ್ತಿಗಳು ನಮಗೆ ಆದರ್ಶರಾದಬೇಕು ಎಂದು ಹೇಳಿದರು.
ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರು ಅಧ್ಯಕ್ಷತೆ ವಹಿಸಿದ್ದರು. ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಸಿಪ್ರಿಯನ್ ಮೊಂತೆರೋ, ಕಾರ್ಮಿಕರ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿದ್ದರು.
ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ, ಪ್ರಧಾನ ಕಾರ್ಯದರ್ಶಿ ಎಂ.ಬಿ.ಸದಾಶಿವ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮಂಜುಳಾ ಬಡಿಗೇರ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಪಿ.ಬಿ. ವೇದಿಕೆಯಲ್ಲಿದ್ದರು.



































