ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ” ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದು ಅತ್ಯಂತ ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಬ್ಬ ಜನಪ್ರತಿನಿಧಿಯ ಬಗ್ಗೆ, ಅದರಲ್ಲೂ ಮಹಿಳಾ ಶಾಸಕಿಯ ವಿರುದ್ಧ ಈ ರೀತಿಯಲ್ಲಿ ಕೀಳುಮಟ್ಟದ ಪೋಸ್ಟ್ ಹಾಕಿರುವುದು ಅತ್ಯಂತ ಖಂಡನೀಯ. ವಿವೇಚನೆ ಇಲ್ಲದ ಅಭಿವ್ಯಕ್ತಿ ಮತ್ತು ಸಂಸ್ಕಾರವಿಲ್ಲದ ಟೀಕೆಗಳನ್ನು ನಾಗರಿಕ ಸಮಾಜ ಎಂದಿಗೂ ಒಪ್ಪಲು ಸಾಧ್ಯವಿಲ್ಲ; ಅವು ವಿಕೃತ ಮನಸ್ಸಿನ ಕೆಟ್ಟ ಆಲೋಚನೆಗಳ ಅತಿರೇಕರ ವರ್ತನೆಯಾಗಿದೆ. ಜಾಲತಾಣದಲ್ಲಿ ಜನಪ್ರತಿನಿಧಿಗಳನ್ನು ಈ ರೀತಿ ತೇಜೋವಧೆ ಮಾಡಿರುವುದು ಅತ್ಯಂತ ಗಂಭೀರ ವಿಚಾರ” ಎಂದು ಖೇದ ವ್ಯಕ್ತಪಡಿಸಿದ್ದಾರೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಾಜದ ಸ್ವಾಸ್ಥ್ಯ ಕೆಡಿಸುವ ಇಂತಹ ಪೋಸ್ಟ್‌ಗಳು ಕೇವಲ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತವೆ. ಸಾಮಾಜಿಕ ಜಾಲತಾಣಗಳನ್ನು ಸದುಪಯೋಗಪಡಿಸಿಕೊಳ್ಳುವ ಬದಲು, ವ್ಯಕ್ತಿತ್ವ ಹರಣಕ್ಕೆ ಬಳಸುತ್ತಿರುವುದು ಅತ್ಯಂತ ವಿಷಾದನೀಯ ಎಂದು ಕ್ಯಾ. ಚೌಟ ಅವರು ಹೇಳಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top