ರಾಜ್ಯದಲ್ಲಿ ಮತ್ತೆ ಎರಡು ದಿನ ಭಾರೀ ಮಳೆ!

ತಮಿಳುನಾಡಿನ ಕರಾವಳಿ ಭಾಗದ ಮನ್ನಾರ್ ಕೊಲ್ಲಿಯಲ್ಲಿ ಸಮುದ್ರ ಮಟ್ಟದಿಂದ 1 ಕಿ.ಮೀ ಎತ್ತರದಲ್ಲಿ ಚಂಡಮಾರುತ ಪ್ರಸರಣ ಉಂಟಾಗಿದೆ. ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆಯಾಗಿದ್ದು, ಮುಂದಿನ ಎರಡು ದಿನ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆ ಮತ್ತೆ ಮಳೆ ಸಿಂಚನವಾಗಿದೆ. ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top