ಆಂಬ್ಯುಲೆನ್ಸ್ ನಲ್ಲಿ‌ ಹೆಣ್ಣು ಮಗುವಿಗೆ ಜನ್ಮ ನೀಡಿದ ಗರ್ಭಿಣಿ ಮಹಿಳೆ

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮಹಿಳೆ ಆಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಇಂದು (ಜ. 15) ಮುಂಜಾನೆ ಪಂಜದಿಂದ ವರದಿಯಾಗಿದೆ.
ಕುತ್ಕುಂಜ ಗ್ರಾಮದ ಯೋಗೇಶ್ ಎಂಬವರ ಪತ್ನಿ ಯಶಕಲ ಅವರಿಗೆ ಇಂದು ಮುಂಜಾನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಪಂಜದ ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್‌ನ ಜೀವರಕ್ಷಕ ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.
​ಆದರೆ, ಮುಂಜಾನೆ ಸುಮಾರು 5.10 ರ ವೇಳೆಗೆ ಆಂಬ್ಯುಲೆನ್ಸ್ ಪಂಜ ಪೇಟೆ ಸಮೀಪ ತಲುಪುತ್ತಿದ್ದಂತೆಯೇ ಯಶಕಲ ಅವರು ಆಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ ಮತ್ತು ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top