ನಮ್ಮ ಹಿರಿಯರನ್ನು ನಾವು ಆದರ್ಶ ವ್ಯಕ್ತಿಗಳನ್ನಾಗಿ ಆಯ್ಕೆಮಾಡಿಕೊಳ್ಳಬೇಕೆ ಹೊರತು ಇನ್ಯಾವುದೇ ಅನ್ಯ ವ್ಯಕ್ತಿಗಳನ್ನು ಆದರ್ಶ ವ್ಯಕ್ತಿಗಳನ್ನಾಗಿ ಜೀವನದಲ್ಲಿ ಆಯ್ಕೆ ಮಾಡಿ ಕೊಳ್ಳಬಾರದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ತೊಡಿಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಮೃತ ಮಹೋತ್ಸವ ಆಚರಣಾ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಶಾಲಾ ಅಮೃತ ಮಹೋತ್ಸವ ಅಂಗವಾಗಿ ಶಾಲೆಯ ವಠಾರದಲ್ಲಿ ಜ. 22ರಂದು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರೈತನ ಮಗ ರೈತನಾಗಬೇಕಾಗಿಲ್ಲ ಅವನು ಕ್ರಷಿ ವಿಜ್ಞಾನಿಯಾಗಬಹು.ಗ್ರಾಮೀಣ ಪರಿಸದಲ್ಲಿ ಇರುವ ಈ ಶಾಲೆಯಲ್ಲಿ ಅನೇಕರು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿ ಹೊರಹೊಮ್ಮಿರುವುದು ಈ ಶಾಲೆಯ ಹೆಮ್ಮೆ ಎಂದು ಹೇಳಿದರು.
ರಾಮಕುಂಜ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸತೀಶ್ ಭಟ್ ದಿಕ್ಸೂಜಿ ಭಾಷಣ ಮಾಡಿದರು.
ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹೀದ್ ಸದಾನಂದ ಮಾವಜಿ ರಾಜ್ಯ ಅರೆಭಾಷೆ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಭರತ್ ಮುಂಡೋಡಿ.ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕರಾದ ಕೆ.ಆರ್.ಗಂಗಾಧರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನಾಧಿಕಾರಿ ಮಾಧವ ಗೌಡ,ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭವಾನಿ ಚಿಟ್ಟನ್ನೂರು,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ,ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ,ಶಾಲಾ ಅಭಿವ್ರದ್ದಿ ಸಮಿತಿ ಅಧ್ಯಕ್ಷ ನವೀನ್ ಅಮೆಮನೆ,ವಿಜೇತ್ ಮರುವಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. .ಈ ಸಾಧಕ ಹಿರಿಯ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಶಾಸಕರು ಸನ್ಮಾನಿಸಿದರು.
ಅಮ್ರತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಶಿಕ್ಷಕ ಅರುಣ್ ಕುಮಾರ್ ವರದಿ ವಾಚಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ವಂದಿಸಿದರು.ಕು.ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.
ನಮ್ಮ ಹಿರಿಯರು ನಮಗೆ ಆದರ್ಶವಾಗಬೇಕು : ಶಾಸಕಿ ಭಾಗೀರಥಿ ಮುರುಳ್ಯ



































