ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಜ.24ರಂದು ಗೊನೆ ಮುಹೂರ್ತ ನಡೆಯಿತು.
ಕುದ್ವ ತೋಟದಲ್ಲಿ ಗೊನೆ ಕಡಿದು ಬ್ಯಾಂಡ್ ವಾಲಗದ ಮೆರವಣಿಗೆಯಲ್ಲಿ ದೇವಳಕ್ಕೆ ತಂದು ಪೂಜೆ ಸಲ್ಲಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಮಾಯಿಲಪ್ಪ ಗೌಡ ಪಟ್ಟೆ ಎಣ್ಣೂರು, ಸಂತೋಷ್ ಕುಮಾರ್ ರೈ ಬಳ್ಳ, ಧರ್ಮಪಾಲ ಗೌಡ ಮರಕ್ಕಡ, ಧರ್ಮಣ್ಣ ನಾಯ್ಕ ಗರಡಿ, ಮಾಲಿನಿ ಕುದ್ದ, ಪವಿತ್ರ ಮಲ್ಲೆಟಿ, ಸತ್ಯನಾರಾಯಣ ಭಟ್ ರಾಮಚಂದ್ರ ಭಟ್, ಗೌರವ ಸಲಹೆಗಾರರಾದ ಪರಮೇಶ್ವರ ಬಿಳಿಮಲೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲು ಗುತ್ತು,ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಮೋನಪ್ಪ ನಾಯ್ಕ ಸೌಧಾಮಿನಿ, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.
:



































