ತಂದೆಯಿಂದಲೇ ಮಗನ ಮೇಲೆ ಗುಂಡು ಹಾರಿಸಿ ಕೊಲೆ !

ಕಡಬ ತಾಲೂಕಿನ ರಾಮಕುಂಜದಲ್ಲಿ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ತಂದೆಯೇ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಕುಂಜದ ಪಾದೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು.
ಮೋಕ್ಷ (17) ಗುಂಡೇಟು ತಗುಲಿ ಸಾವನ್ನಪ್ಪಿದ ಬಾಲಕ. ರಾಮಕುಂಜ ಗ್ರಾಮದ ಪಾದೆ ನಿವಾಸಿ ತಂದೆ ವಸಂತ ಪೂಜಾರಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ವಸಂತ ಪೂಜಾರಿ ವಿರುದ್ಧ ಆತನ ಪತ್ನಿ ಜಯಶ್ರೀ ದೂರು ದಾಖಲಿಸಿದ್ದಾರೆ. ಮಗನಿಗೆ ಶೂಟ್ ಮಾಡಿ ಆರೋಪಿ ವಸಂತ ಪೂಜಾರಿ ಚಾಕುವಿನಿಂದ ತನ್ನನ್ನು ಇರಿದುಕೊಂಡಿದ್ದಾನೆ. ಆರೋಪಿಯನ್ನು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.





















































































ಕಳೆದ ಒಂದು ವರ್ಷದಿಂದ ಮನೆಯಲ್ಲಿ ತಂದೆ ಮತ್ತು ಮಗ ಮಾತ್ರ ವಾಸಿಸುತ್ತಿದ್ದರು. ಪತ್ನಿ ಜಯಶ್ರೀ ಪತಿಯೊಂದಿಗೆ ಮನಸ್ತಾಪಗೊಂಡು ಮಂಗಳೂರಿನ ತನ್ನ ತವರು ಮನೆಯಲ್ಲಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top