ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡವರಲ್ಲಿ ಅನ್ವರ್ ಎಂಬ ಬಾಲಕನನ್ನು ಹೈದರಾಬಾದ್‌ಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಮೊಳಗಿ ಮಾರಾಯ ದೇಗುಲಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಮನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಆರು ತಿಂಗಳಲ್ಲಿ ಇದು ಎರಡನೇ ಸ್ಪೋಟವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಬೀದರ್‌ನಲ್ಲಿ ಸ್ಫೋಟ; 6 ಮಕ್ಕಳಿಗೆ ಗಂಭೀರ ಗಾಯ



































