ಪಂಜ ಸೀಮೆಯ ದೇವಳದಲ್ಲಿ ವರ್ಷವಾಧಿ ಜಾತ್ರೋತ್ಸವ : ಭಜನಾ ಸಂಕೀರ್ತನೆ ಆರಂಭ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವ ಜ. 24 ರಿಂದ ಫೆ. 9ರ ತನಕ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ. 1ರಂದು ಸಂಜೆ ಭಜನಾ ಸಂಕೀರ್ತನೆಗೆ ದೀಪ ಪ್ರಜ್ವಲನೆ ನಡೆಯಿತು.ದೇವಳದಲ್ಲಿ ಪ್ರಾರ್ಥನೆ ನಡೆದು ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿ ಪ್ರಸಾದ್ ಕಾನತ್ತೂರು ರವರು ದೀಪ ಪ್ರಜ್ವಲನೆ ಗೊಳಿಸಿದರು. ಭಜನಾ ಸಂಕೀರ್ತನೆ ಸಂಚಾಲಕ ಮಹಾಲಿಂಗ ಸಂಪ, ಭಕ್ತಾದಿಗಳು ಉಪಸ್ಥಿತರಿದ್ದರು. ಬಳಿಕ ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ವನಿತಾ ಸಮಾಜ ಪಂಜ ರವರಿಂದ ಭಜನಾ ಸಂಕೀರ್ತನೆ ಜರುಗಿತು. ಫೆ. 7 ತನಕ ವಿವಿಧ ಭಜನಾ ತಂಡಗಳಿಂದ ಭಜನಾ
ಸಂಕೀರ್ತನೆ ಜರುಗಲಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top