ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.1 ರಂದು ಧ್ವಜಾರೋಹಣ ನಡೆಯಿತು.



































































































ಫೆ.1ರಂದು ವೇದ ಪಾರಾಯಣ, ಮಧ್ಯಾಹ್ನ ಮಹಾಪೂಜೆ. ಅನ್ನಸಂತರ್ಪಣೆ. ಸಂಜೆ ಕ್ಷೇತ್ರಕ್ಕೆ ಆಗಮಿಸಿದ ತಂತ್ರಿಗಳನ್ನು ಪೂರ್ಣಕುಂಭ ದೊಂದಿಗೆ ಸ್ವಾಗತಿಸಲಾಯಿತು, ಬಳಿಕ ಧ್ವಜಸ್ಥಂಭಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಧ್ವಜಾರೋಹಣ ನಡೆಯಿತು, ಬಳಿಕ ಮಹಾಪೂಜೆ, ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ನಡೆಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನಾ ಸಮಿತಿ ಪೂರ್ವಾಧ್ಯಕ್ಷರಾದ ಡಾ.ರಾಮಯ್ಯ ಭಟ್, ಪದ್ಮನಾಭ ರೈ ಅಗೋಳಿಬೈಲು ಗುತ್ತು, ಶ್ರೀ ಪೈಂದೋಡಿ ಸುಬ್ರಾಯ ಸ್ವಾಮಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ದ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ ಕಾಯಂಬಾಡಿ, ಧರ್ಮಪಾಲ ಗೌಡ ಮರಕ್ಕಡ, ಸಂತೋಷ್ ಕುಮಾರ್ ರೈ ಬಳ್ಳ ಮಾಯಿಲಪ್ಪ ಗೌಡ ಪಟ್ಟೆ ಎಣ್ಣೂರು, ಧರ್ಮಣ್ಣ ನಾಯ್ಕ ಗರಡಿ, ಮಾಲಿನಿ ಕುದ್ದ, ಪವಿತ್ರ ಮಲ್ಲೆಟ್ಟಿ,ಗೌರವ ಸಲಹೆಗಾರ ಮಹೇಶ್ ಕುಮಾರ್ ಕರಿಕ್ಕಳ, ಪರಮೇಶ್ವರ ಬಿಳಿಮಲೆ, ಉಮೇಶ್ ಬುಡೆಂಗಿ ಬಳ್ಳ, ಉತ್ಸವ ಸಮಿತಿಯಗಳ ಸಂಚಾಲಕರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.


Leave a Comment

Your email address will not be published. Required fields are marked *

error: Content is protected !!
Scroll to Top