ಅಕ್ರಮವಾಗಿ ಕರ್ನಾಟಕದಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ಹೊರ ಕಳುಹಿಸುತ್ತೇವೆ, ಅವರಿಗೆ ಮನೆಗಳನ್ನು ನೀಡುವುದಿಲ್ಲ” ಎಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. “ನಮ್ಮ ಸರ್ಕಾರ ಹಾದಿಯನ್ನು ತಪ್ಪಿಲ್ಲ ಹಾಗೂ ನಾನು ಅಸಹಾಯಕ ಮುಖ್ಯಮಂತ್ರಿಯೂ ಅಲ್ಲ. 2.5 ವರ್ಷದಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಸರ್ಕಾರ 1452000 ಮನೆಗಳನ್ನು ನಿರ್ಮಿಸಿದ್ದೇವೆ, ಬಿಜೆಪಿ ಅವಧಿಯಲ್ಲಿ ಕೇವಲ 5 ಲಕ್ಷ ಮನೆಗಳಾಗಿವೆ” ಎಂದು ಅವರು ಹೇಳಿದರು.
“





















































