ಕರ್ನಾಟದಲ್ಲಿ 2021 ರಿಂದ 2026 ರ ವರೆಗೆ ನಾಲ್ಕು ವರ್ಷಗಳಲ್ಲಿ ಒಟ್ಟು 3,617 ಸರ್ಕಾರಿ ಶಾಲೆಗಳು ಮುಚ್ಚಿವೆ.
ಕೇಂದ್ರ ಶಿಕ್ಷಣ ಸಚಿವಾಲಯ ರಾಜ್ಯಸಭೆಯಲ್ಲಿ ಮಂಡಿಸಿದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 20-21 ರಿಂದ 24-25 ರ ಅವಧಿಯಲ್ಲಿ 947 ಮುಚ್ಚಿದ್ದವು. ಶಾಲಾ ಶಿಕ್ಷಣ ಇಲಾಖೆಯು ಅಕ್ಟೋಬರ್ 15-2025 ರ ಆದೇಶದ ಪ್ರಕಾರ 2025-26 ನೇ ಸಾಲಿನಲ್ಲಿ 2,670 ಶಾಲೆಗಳು ಮುಚ್ಚಿವೆ. ಎಲ್ಲವೂ ಸೇರಿ ಒಟ್ಟು 3.617 ಶಾಲೆಗಳಿಗೆ ಬೀಗ ಹಾಕಲಾಗಿದೆ.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ದಾಖಲೆಯು 47.1 ಲಕ್ಷ ದಿಂದ 38.2 ಕ್ಕೆ ಇಳಿಕೆಯಾಗಿದೆ. ಇದರಿಂದ ಶೇ 19 ರಷ್ಟು ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯು 36.3 ಲಕ್ಷದಿಂದ 47 ಲಕ್ಷಕ್ಕೆ ಏರಿಕೆಯಾಗಿದೆ.



































