ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಸುಳ್ಯ ಇದರ ವತಿಯಿಂದ ಸುಳ್ಯ ಭಾಗದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯ ವ್ಯವಸ್ಥೆಗಳ ಮತ್ತು ಬೇಡಿಕೆಗಳ ಬಗ್ಗೆ ಗಮನಿಸಲಾಯಿತು.ಹಾಗೂ ಹೊಸ ಕಟ್ಟಡದ ಬೇಡಿಕೆಯನ್ನು ಮುಂದಿಟ್ಟಿರುವ ಕಾರಣ ಮಾನ್ಯ ಶಾಸಕರ ಜೊತೆ ಮತ್ತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವೆವು ಎಂಬ ಭರವಸೆ ನೀಡಲಾಯಿತು.
ಈ ಸಂಧರ್ಭ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ ಕೆ, ಪ್ರಧಾನ ಕಾರ್ಯದರ್ಶಿ ಶಶಿಕಲಾ ನೀರಬಿದಿರೆ, ಶ್ರೀಮತಿ ಲೋಲಾಕ್ಷಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಗುಣವತಿ ಕೊಲ್ಲಂತಡ್ಕ , ಮಹಿಳಾ ಮೋರ್ಚಾ ಕಾರ್ಯದರ್ಶಿ ಭಾರತಿ ಪುರುಷೋತ್ತಮ್, ಸದಸ್ಯರಾದ ಸುಮತಿ ಹಾಗೂ ದಿವ್ಯಾ ಮಡಪ್ಪಾಡಿ ಉಪಸ್ಥಿತರಿದ್ದರು.
ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ



































