ಪಂಜ ಸೀಮೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮಕ್ಕೆ ಚಾಲನೆ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ
ಮಹಾಶಿವರಾತ್ರಿ ಪ್ರಯುಕ್ತ ಫೆ. 15 ರಂದು ಮುಂಜಾನೆ ಭಜನಾ ಕಾರ್ಯಕ್ರಮ ಅರಂಭಗೊಂಡಿತು.ಅಲ್ಲದೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರು ದೀಪ ಪ್ರಜ್ವಲನ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ ಉಪಸ್ಥಿತರಿದ್ದರು.
ಪಂಚಶ್ರೀ ಭಜನಾ ಮಂಡಳಿ ಪಂಬೆತ್ತಾಡಿ,ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ ತಂಡ ನಾಗತೀರ್ಥ,ಶ್ರೀ ಶಂಕರನಾರಾಯಣ ಭಜನಾ ಮಂಡಳಿ ಕೂತ್ಕುಂಜ,ಭಾವನಾ ಬಳಗ ಪಂಜ, ಶ್ರೀ ಕೃಷ್ಣ ಭಜನಾ ಮಂಡಳಿ ಅಡ್ಡಬೈಲು, ಶ್ರೀ ಧರ್ಮ ಶಾಸ್ತವು ಭಜನಾ ಮಂಡಳಿ ಬಳ್ಳ, ಶ್ರೀ ವಿಷ್ಣು ಭಜನಾ ಮಂಡಳಿ ಅಳ್ಳೆ – ಚಿಂಗಾಣಿಗುಡ್ಡೆ, ಶ್ರೀ ಸಾಕ್ಷಾತ್ ಶಿವ ಭಜನಾ ಮಂಡಳಿ ಚಾರ್ವಕ,ಶಿವಳ್ಳಿ ಸಂಪದ ಪಂಜ, ವನಿತಾ ಸಮಾಜ (ರಿ.) ಪಂಜ ರವರು ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top