ಶಾಲಾ ಬಸ್ ಗೆ ಕ್ಯಾಂಟರ್ ಡಿಕ್ಕಿಯಾಗಿ 7 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರು ಹೊರವಲಯದ ಕಾಪಿಕಾಡು ಬಳಿ ಫೆ.16ರಂದು ನಡೆದಿದೆ. ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಗೆ ಸೇರಿದ ಬಸ್‌ಗೆ ಗೋವಾದಿಂದ ಕೇರಳದ ಕಡೆಗೆ ಹೊರಟಿದ್ದ ಮೀನು ಸಾಗಾಟದ ಕ್ಯಾಂಟರ್ ಹಿಂದಿನಿಂದ ಡಿಕ್ಕಿ ಹೊಡೆದೆದಿದೆ. ಉಡುಪಿ ಜಿಲ್ಲೆ ಕುಂದಾಪುರ ಮೂಲದ ಕ್ಯಾಂಟರ್ ಚಾಲಕ ಸಂಜೀವ್ ನಿದ್ರೆಯ ಮಂಪರಿನಲ್ಲಿದ್ದ ಎನ್ನಲಾಗಿದ್ದು, ಗಾಯಾಳು ವಿದ್ಯಾರ್ಥಿಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದಾರೆ.
ಮಂಗಳೂರು : ಶಾಲಾ ಬಸ್ ಗೆ ಕ್ಯಾಂಟರ್ ಡಿಕ್ಕಿ,7 ವಿದ್ಯಾರ್ಥಿಗಳು ಗಂಭೀರ

















