ಅಹ್ಮದಾಬಾದ್‌ನಲ್ಲಿ ಬುಧವಾರ ನಡೆದ ‘ಎ’ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾದವು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 194 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡ 176 ರನ್ ಗಳಿಸಿ ಸೋಲು ಕಂಡಿದೆ. ಈ ಮೂಲಕ ಟೀಂ ಇಂಡಿಯಾ 17 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ.
ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡಕ್ಕೆ 17 ರನ್ ಗಳ ಅಂತರದ ಭರ್ಜರಿ ಗೆಲುವು

















