, ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಪಾಕಿಸ್ತಾನದ ಸೈನಿಕ ನೆಲೆಗಳ ಮೇಲೆ ಭಾರೀ ದಾಳಿಯನ್ನು ಆರಂಭಿಸಿರುವುದಾಗಿ ತಿಳಿಸಿದೆ.
ಇದರಿಂದ ಅಫ್ಘಾನಿಸ್ತಾನ ಹಾಗೂ ಪಾಕಿಸ್ರಾನ ನಡುವಿನ ಗಡಿ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿದೆ.
ಕಳೆದ ವಾರ ಪಾಕಿಸ್ತಾನ ನಡೆಸಿದ ವಾಯು ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿ ನಡೆದಿರುವುದಾಗಿ ತಾಲಿಬಾನ್ ಅಧಿಕಾರಿಗಳು ಹೇಳಿದ್ದಾರೆ.
ತಾಲಿಬಾನ್ ಸರ್ಕಾರದ ವಕ್ತಾರ ಜೂಬಿಹುಲಾಲ್ ಮುಜಾಹಿದ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಪಾಕಿಸ್ತಾನ ಸೇನೆಯ ಪ್ರಚೋದನೆಗಳು ಹಾಗೂ ಗಡಿ ಉಲ್ಲಂಘನೆಗಳಿಗೆ ಪ್ರತಿಯಾಗಿ ದೊಡ್ಡ ಮಟ್ಟದ ಸೈನಿಕ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಗಡಿಯಾದ್ಯಂತ ಪಾಕಿಸ್ತಾನದ ಸೈನಿಕ ತಾಣಗಳು ಹಾಗೂ ಸ್ಥಾಪನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇರಡು ದೇಶಗಳ ನಡುವೆ 2,611 ಕಿಲೋಮೀಟರ್ ಉದ್ದದ ಗಡಿ ಇದೆ. ಈ ಗಡಿಯನ್ನು ದುರಂದ್ ಲೈನ್ ಎಂದು ಕರೆಯಲಾಗುತ್ತದೆ. ಆದರೆ ಈ ಗಡಿಯನ್ನು ಅಫ್ಘಾನಿಸ್ತಾನ ಅಧಿಕೃತವಾಗಿ ಮಾನ್ಯತೆ ನೀಡಿಲ್ಲ. ಇದರಿಂದಾಗಿ ಗಡಿ ವಿವಾದ ಹಲವು ವರ್ಷಗಳಿಂದ ಮುಂದುವರಿದಿದೆ.
ಅಫ್ಘಾನಿಸ್ತಾನ ಪಾಕಿಸ್ತಾನದ ಸೈನಿಕ ನೆಲೆಗಳ ಮೇಲೆ ಭಾರೀ ದಾಳಿ

















