ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ಇಂದು(ಫೆ.1) ಭೇಟಿ ನೀಡಲಿದ್ದಾರೆ. ಸಂಜೆ 5.20ಕ್ಕೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್‌ನಲ್ಲಿ ಬಂದಿಳಿಯುವರು.
ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಇಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು. ಪ್ರವಾಸದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಝಡ್ ಪ್ಲಸ್ ಭದ್ರತೆ ಇರಲಿದೆ.



































