ಲಂಚಕ್ಕೆ ಬೇಡಿಕೆ ಇರಿಸಿ ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಮಾ.2ರಂದು ವರದಿಯಾಗಿದೆ.
ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳ ನಿರ್ವಹಿಸಿದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಿಗೆ ಕೆಲಸದ ಬಿಲ್ ಪಾವತಿಗೆ ಶೇ.4ರಂತೆ 22,600 ರೂ. ಕೊಡಬೇಕು ಎಂಬುದಾಗಿ ಲಂಚದ ಬೇಡಿಕೆ ಇರಿಸಿ ಲಂಚ ಸ್ವೀಕರಿಸುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ.
ಎಸ್.ಡಿ.ಎ ಸಂಪತ್ ಬಂಧನಕೊಳಾದ ಆರೋಪಿ
ದೂರುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದು, 2025 ರ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದರು.
ಈ ಕೆಲಸದ ಬಿಲ್‌ಗೆ 4 ಪರ್ಸೆಂಟ್‌ನಂತೆ ಒಟ್ಟು 22,600 ರೂ. ಕೊಡಬೇಕು ಎಂಬುದಾಗಿ ಮಂಗಳೂರಿನ ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯ ಎಸ್.ಡಿ.ಎ ಸಂಪತ್ ರವರು ದೂರುದಾರರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ





















































