ಅಡುಗೆ ವಿಚಾರವಾಗಿ ಅತ್ತೆ ಸೊಸೆ ಜಗಳ,ಸೊಸೆ ನೇಣು ಬಿಗಿದು ಆತ್ಮಹತ್ಯೆ

ಅಡುಗೆ ವಿಷಯದಲ್ಲಿ ಅತ್ತೆ ಜೊತೆ ಜಗಳವಾಗಿ ಸೊಸೆಯೊಬ್ಬರು ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಟೆಕ್ಕಿ ಸುಷ್ಮಾ(35) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ.
ಸುಷ್ಮಾ ಅವರು ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಎಂಬುವವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ. ಸಣ್ಣಪುಟ್ಟ ವಿಷಯಗಳಿಗೆ ಮನೆಯಲ್ಲಿ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.ನಿನ್ನೆ ಸುಷ್ಮಾ ಮತ್ತು ಅವರ ಅತ್ತೆ ಕಲ್ಪನಾ ನಡುವೆ ಅಡುಗೆ ಮಾಡುವ ವಿಚಾರವಾಗಿ ಜಗಳ ನಡೆದಿತ್ತು ಎನ್ನಲಾಗಿದೆ.
ಕಲ್ಪನಾ ಅವರು ಸುಷ್ಮಾ ಅವರಿಗೆ ಅಡುಗೆ ಮಾಡಲು ಬಿಡುತ್ತಿರಲಿಲ್ಲ ಮತ್ತು ವಿವಿಧ ವಿಷಯಗಳ ಕುರಿತು ಅವರಿಗೆ ಕಿರುಕುಳ ನೀಡುತ್ತಿದ್ದರು ಎಂದು ಸುಷ್ಮಾ ಅವರ ಕುಟುಂಬ ಆರೋಪಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top