ಜಂಪ್ ರೋಪ್ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟಮಟ್ಟಕ್ಕೆ-ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ

ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಟ್ಟ ರಾಜ್ಯಮಟ್ಟದ ಗುಂಪು ಆಟ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ 24 ವಿದ್ಯಾರ್ಥಿಗಳು ಭಾಗವಹಿಸಿ, 4 ಮಂದಿ ವಿದ್ಯಾರ್ಥಿಗಳು ಪ್ರಥಮ, 8 ಮಂದಿ ವಿದ್ಯಾರ್ಥಿಗಳು ದ್ವಿತೀಯ, 4 ವಿದ್ಯಾರ್ಥಿನಿಯರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಾಲ್ಕು ಮಂದಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಭಿನಂದನಾ ಸಮಾರಂಭ: ಸೋಮವಾರ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಆಶ್ರಯದಲ್ಲಿ ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿ, ಅಭಿನಂದಿಸಿದರು. ಶಾಲಾ ಸಂಚಾಲಕ ಸದಾನಂದ ಮಾವಜಿ, ಜತೆ ಕಾರ್ಯದರ್ಶಿ ಜಯರಾಮ ರೈ ಜಾಲ್ಸೂರು ಅಭಿನಂದಿಸಿ ಮಾತನಾಡಿದರು. ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ರಾಮಚಂದ್ರ ಕೆ.ಬಿ, ನಿರ್ದೇಶಕರಾದ ಬಾಲಚಂದ್ರ ದೇವರಗುಂಡ, ಸುಂದರ ಗೌಡ ಕಾಡುಸೊರಂಜ, ನಾರಾಯಣ ಬೊಮ್ಮೆಟ್ಟಿ, ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಎಸ್ ಡಿಎಂಸಿ ಅಧ್ಯಕ್ಷ ಚಂದ್ರಶೇಖರ ವೇದಿಕೆಯಲ್ಲಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಪಂದ್ಯಾಟದ ತರಬೇತುದಾರ ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ .ಕೆ ಇವರನ್ನು ಎಜ್ಯುಕೇಶನ್ ಸೊಸೈಟಿ ಹಾಗೂ ಶಾಲಾ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು. ಶಿಕ್ಷಕ ಶಿವಪ್ರಕಾಶ ಕೆ.ಸ್ವಾಗತಿಸಿ, ಶಿಕ್ಷಕಿ ಮೀನಕುಮಾರಿ ವಂದಿಸಿದರು. ಶಿಕ್ಷಕಿ ಸವಿತ ಕುಮಾರಿ ವಂದಿಸಿದರು. ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top