ಸುಳ್ಯ : ಕುಸಿದು ಬಿದ್ದು ಉಪನ್ಯಾಸಕ ಸಾವು

ಸುಳ್ಯ:ಸುಳ್ಯ ತಾಲೂಕಿನ ಕೊಡಿಯಾಲಬೈಲ್ ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕರೊಬ್ಬರು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಾ.12ರಂದು ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೃತರನ್ನು ಮಂಜು(42) ಎಂದು ಗುರುತಿಸಲಾಗಿದ್ದು, ಇವರು ಕನ್ನಡ ಉಪನ್ಯಾಸಕರಾಗಿ ಕಳೆದ 2 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಆರಂಭದಲ್ಲಿ ಹೈಸ್ಕೂಲ್ ನಲ್ಲಿ ಪಾಠ ನಿರ್ವಹಿಸುತ್ತಿದ್ದ ಇವರು ಕಾಲೇಜಿಗೆ ಭಡ್ತಿ ಪಡೆದಿದ್ದರು. ಮೂಲತಃ ಇವರು ಕೆ.ಆರ್. ನಗರದವರು. ಇಂದು ಮಧ್ಯಾಹ್ನ ಕಾಲೇಜಿನ ಸಿಬ್ಬಂದಿ ಜೊತೆ ಚೆನ್ನಾಗಿಯೇ ಮಾತನಾಡಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನನಗೆ ಸ್ವಲ್ಪ ಹುಷಾರಿಲ್ಲ ಎಂದು ಹೇಳಿಕೊಂಡು ವಿಶ್ರಾಂತಿಗಾಗಿ ಮನೆಗೆ ತೆರಳಿದ್ದರು. ಅಲ್ಲಿಂದ ಬಳಿಕ ಅವರು ಔಷಧಿಗಾಗಿ ಮೆಡಿಕಲ್ ಗೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಶ್ರೀರಾಂ ಪೇಟೆಯ ಬಳಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಠಾತ್ ಸಾವಿನಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top