ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕಡಬ ತಾಲೂಕಿನ ಹಲವೆಡೆಗಳಲ್ಲಿ ಮಾರ್ಚ್ 15ರಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಯ ರಭಸಕ್ಕೆ ಮರಗಳು ಉರುಳಿ ಹಾನಿ ಸಂಭವಿಸಿದೆ.
ಹರಿಹರ ಬಾಳುಗೋಡು,ಗುತ್ತಿಗಾರು ಇತರ ಕಡೆ ಮಳೆ ಸುರಿದಿವೆ. ಸುಬ್ರಹ್ಮಣ್ಯದ ಸವಾರಿ ಮಂಟಪದಿಂದ ದೇವರ ಗದ್ದೆ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಭಾರೀ ಗಾಳಿಗೆ ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದಿದೆ. ಸಾಮಾನ್ಯವಾಗಿ ಈ ರಸ್ತೆಯ ಎರಡು ಬದಿಗಳಲ್ಲಿ ಭಕ್ತರು ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಾರೆ. ಆದರೆ, ಇಂದು ಏಕಾದಶಿ ಆಗಿದ್ದರಿಂದ ಭಕ್ತರ ಸಂಖ್ಯೆ ಕಡಿಮೆ ಇದ್ದ ಹಿನ್ನಲೆಯಲ್ಲಿ ಮರ ಬಿದ್ದ ಜಾಗದಲ್ಲಿ ವಾಹನಗಳಿಲ್ಲದ ಕಾರಣ ದೊಡ್ಡ ಮಟ್ಟದ ಹಾನಿ ತಪ್ಪಿದಂತಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಗಾಳಿ ಮಳೆ!



























































