ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ದೈತ್ಯ ಒಂಟಿಸಲಗ ಗ್ರಾಮಕ್ಕೆ ನುಗ್ಗಿ, ಕೃಷ್ಣಪ್ಪ ಎಂಬುವವರಿಗೆ ಸೇರಿದ ಆಟೋವನ್ನು ಜಖಂಗೊಳಿಸಿದೆ. ಆನೆಯನ್ನು ಓಡಿಸಲು ಪಟಾಕಿ ಸಿಡಿಸಿದಾಗ, ಅದು ರೊಚ್ಚಿಗೆದ್ದು ಆಟೋ ಮೇಲೆ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಳೆದ ವಾರದಿಂದ ಈ ಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಕೃಷಿಕರು ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ.
ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಆಟೋವನ್ನು ಮಾಡಿದ್ದೇನು ನೋಡಿ!














































