ಕಂಟೈನರ್ ಲಾರಿ ಮೂಲಕ ಹಾಸನದಿಂದ ಕೇರಳಕ್ಕೆ ಹಿಂಸಾತ್ಮಕ ವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಕಡಬದ ಕನ್ಪಾರೆ ಎಂಬಲ್ಲಿ ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 19 ಜಾನುವಾರುಗಳನ್ನು ರಕ್ಷಿಸಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಅಮಾನವೀಯ ರೀತಿಯಲ್ಲಿ ತುಂಬಿಸಲಾಗಿದ್ದ 19 ಜಾನುವಾರುಗಳು ಪತ್ತೆಯಾಗಿವೆ. ಪೊಲೀಸರು ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಹೊಸೂರು ಮೂಲದ ಅಕ್ರಮ್ ಪಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತೊಬ್ಬ ಆರೋಪಿ ಓಡಿ ತಪ್ಪಿಸಿಕೊಂಡಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಂಟೈನರ್ ಲಾರಿ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಟ ಪತ್ತೆ!

























































