ಪುನ್ಚತ್ತಾರು : ಶ್ರದ್ಧಾ ಭಕ್ತಿಯಿಂದ ನಡೆದ ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ನಡೆದ ಶ್ರೀ ವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ ಎ. 3 ಮತ್ತು 4ರಂದು ನಡೆಯಿತು. ಏ.4ರಂದು ಮುಂಜಾನೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ನಡೆಯಿತು.ಬಳಿಕ ಪ್ರಸಾದ ವಿತರಣೆ ನಡೆಯಿತು.ನಂತರ ಗುಳಿಗ ದೈವದ ಕೋಲ ನಡೆಯಿತು.ಏ.2ರಂದು ಹಸಿರು ಕಾಣಿಕೆ ಸಮರ್ಪಣೆ ನಡೆಯಿತು.
ಎ.3ರಂದು ಬೆಳಿಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದವು. ಸಂಜೆ ವಿಷ್ಣುಪುರ ದೈವಸ್ಥಾನದಿಂದ
ಭಂಡಾರ ತೆಗೆಯಲಾಯಿತು. ಬಳಿಕ ಮೇಲೇರಿಗೆ ಅಗ್ನಿ ಸ್ಪರ್ಶ ಕಾರ್ಯಕ್ರಮ ನಡೆಯಿತು.ಬಳಿಕ ಭಜನಾ ಸತ್ಸಂಗ, ಅನ್ನ ಸಂತರ್ಪನೆ ನೆರವೇರಿತು. ತದನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಭಜನಾ ಸಂಕೀರ್ತನೆಗೆ
ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂ‌ರ್,
ದೀಪ ಪ್ರಜ್ವಲನ ಮಾಡಿ ಚಾಲನೆ ನೀಡಿದರು.
ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಜತೆ ಕಾರ್ಯದರ್ಶಿ ಮಿಥುನ್ ಪೈಕ, ಮೊಕೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ಧನ ಆಚಾರ್ಯ, ಕೃಷ್ಣ ಆಚಾರ್ಯ,ಭಕ್ತರು ಉಪಸ್ಥಿತರಿದ್ದರು.





















































































Leave a Comment

Your email address will not be published. Required fields are marked *

error: Content is protected !!
Scroll to Top