ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ದ.ಕ ಜಿಲ್ಲೆ ದ್ವಿತೀಯ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ ಸುದ್ದಿಗೋಷ್ಠಿ ನಡೆಸಿ ಜಿಲ್ಲಾವಾರು ಫಲಿತಾಂಶದ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಬಾರಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇನ್ನು ಈ ಬಾರಿಯೂ ಕೂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ, ಯಾದಗಿರಿ ಕೊನೆ ಸ್ಥಾನದಲ್ಲಿದೆ. ಶೇ. 96.39 ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಮತ್ತೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ ಶೇ. 96.35 ಫಲಿತಾಂಶದ ಮೂಲಕ ಎರಡನೇ ಸ್ಥಾನ ಪಡೆದಿದೆ. ಇನ್ನು ಯಾದಗಿರಿ ಜಿಲ್ಲೆ ಶೇ.71.21 ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನದಲ್ಲಿದೆ.





















































































Leave a Comment

Your email address will not be published. Required fields are marked *

error: Content is protected !!
Scroll to Top