ಅಮರ ಮುಡ್ನೂರು ಗ್ರಾಮದ ಮುಂಡಕಜೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ,ತುರ್ತು ಸ್ಪಂದಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು

ಅಮರ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡಕಜೆಯಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ನಾಗರಿಕರು ಪರದಾಡುವಂತಾಗಿದ್ದು ಸ್ಥಳೀಯರ ಕೋರಿಕೆ ಮೇರೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯ ಕುರಿತು ಅವಲೋಕಿಸಿದರು. ನೀರಿನ ಟ್ಯಾಂಕಿಯಿಂದ ಬರುವ ಪೈಪ್ ತುಂಡಾಗಿರುವುದು ಮತ್ತು ಇಲ್ಲಿನ ಪಂಪ್ ಆಪರೇಟರ್ ಸರಿಯಾಗಿ ಕರ್ತವ್ಯ ನಿರ್ವಹಿಸದೇ ಇರುವ ಬಗ್ಗೆ ಸ್ಥಳೀಯರು ದೂರು ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಂದಿಗೆ ಕೂಡಲೇ ಸಮಸ್ಯೆ ಸರಿಪಡಿಸುವಂತೆ ಹಾಗೂ ಪಂಪ್ ಆಪರೇಟರ್ ರನ್ನು ತಾತ್ಕಾಲಿಕವಾಗಿ ಬದಲಾಯಿಸುವಂತೆ ಸೂಚನೆ ನೀಡಿ ಸ್ಥಳೀಯರಿಗೆ ಮೂಲಭೂತ ಸೌಕರ್ಯಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗಬಾರದು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಮರ ಮುಡ್ನೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಯಾನಂದ ಪತ್ತುಕುಂಜ ಹಾಗೂ ಸ್ಥಳೀಯ ಮನೆಗಳ ನಿವಾಸಿಗಳು ಉಪಸ್ಥಿತರಿದ್ದರು.





















































































Leave a Comment

Your email address will not be published. Required fields are marked *

error: Content is protected !!
Scroll to Top